ಮುಂಬಯಿ, ಜು.25: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಯು ಕೊಡಮಾಡುವ ವಾರ್ಷಿಕ ಶ್ರೀ ಕೆ.ಟಿ ವೇಣುಗೋಪಾಲ್-:ಕಪಸಮ ರಾಷ್ಟ್ರೀಯ ಮಾಧ್ಯಮಶ್ರೀ-2022 ಮತ್ತು 2023ನೇ ಸಾಲಿನ ಪ್ರಶಸ್ತಿ ಪ್ರಕಟಿಸಿದ್ದು, ಚತುರ್ಥ ಪುರಸ್ಕಾರಕ್ಕೆ ಮುಂಬಯಿನ ದಿವೋ ಕೊಂಕಣಿ ಸಾಪ್ತಾಹಿಕದ ಸಂಪಾದಕ ಲಾರೇನ್ಸ್ ಕುವೆಲ್ಹೋ ಇವರಿಗೆ ಹಾಗೂ ಪಂಚ ಪುರಸ್ಕಾರಕ್ಕೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಾವಳಗಿ ಮೂಲತಃ ಸನತ್ ಕುಮಾರ ಬೆಳಗಲಿ ಇವರನ್ನು ಆಯ್ಕೆ ಮಾಡಿದೆ ಎಂದು ಪತ್ರಕರ್ತರ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚೆಗೆ ನಡೆಸಲ್ಪಟ್ಟ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸಭೆಯ ನಿರ್ಧಾರ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿ ಕಾರ್ಯಾಧ್ಯಕ್ಷೆ ಡಾ| ಸುನೀತಾ ಎಂ.ಶೆಟ್ಟಿ ಮತ್ತು ತೀರ್ಪುಗಾರರ ಸಮಿತಿಯ ಸಹ ಸದಸ್ಯರಾದ ಸಾ.ದಯಾ ಮತ್ತು ಗೋಪಾಲ ತ್ರಾಸಿ ನಿರ್ಣಾಯದಂತೆ ನಾಡಿನ ಹಿರಿಯ ಪತ್ರಕರ್ತರಾದ ಲಾರೇನ್ಸ್ ಕುವೆಲ್ಹೋ ಮತ್ತು ಸನತ್ ಕುಮಾರ ಬೆಳಗಲಿ ಇವರನ್ನು ಆಯ್ಕೆ ಮಾಡಿದೆ ಎಂದು ಪತ್ರಕರ್ತರ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ದಿ| ಶ್ರೀ ಕೆ.ಟಿ ವೇಣುಗೋಪಾಲ್ ಅವರ ಸುಪುತ್ರ ಶ್ರೀ ವಿಕಾಸ್ ವೇಣುಗೋಪಾಲ್ ಪರಿವಾರದ ಸಹಕಾರ ಮತ್ತು ಕಪಸಮ ಸಂಘದ ಪ್ರಶಸ್ತಿನಿಧಿಯೊಂದಿಗೆ ವಾರ್ಷಿಕವಾಗಿ ಕೊಡಮಾಡುವ ಈ ಪ್ರಶಸ್ತಿಯು ರೂಪಾಯಿ 25,000/- (ಇಪ್ಪತ್ತೈದು ಸಾವಿರ) ನಗದು, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆ  ಹೊಂದಿರುತ್ತದೆ.

ಪ್ರಥಮ ಪ್ರಶಸ್ತಿ (2019) ಮುಂಬಯಿಯ ಹಿರಿಯ ಪತ್ರಕರ್ತ ನ್ಯಾ| ವಸಂತ ಕಲಕೋಟಿ ಇವರಿಗೆ  ದ್ವಿತೀಯ ಪ್ರಶಸ್ತಿ (2020) ಮುಂಬಯಿಯಲ್ಲಿನ ಹಿರಿಯ ಪತ್ರಕರ್ತ ಶ್ರೀ ಜಿ.ಕೆ ರಮೇಶ್, ತೃತೀಯ ಪ್ರಶಸ್ತಿ (2021) ಕೇರಳ ಕಾಸರಗೋಡು ಅಲ್ಲಿನ ಹಿರಿಯ ಪತ್ರಕರ್ತ ಶ್ರೀ ಅಚ್ಯುತ ಎಂ.ಚೇವಾ ರ್ ಕೇರಳ ಅವರಿಗೆ ಪ್ರದಾನಿಸಿ ಗೌರವಿಸಲಾಗಿದೆ.

ಇದೇ ಆ.06ನೇ ಭಾನುವಾರ ಪೂರ್ವಾಹ್ನ ಲೋಟಸ್ ಸಭಾಗೃಹ, ಸಾಲೀಟರಿ ಕಾರ್ಪೋರೆಟ್ ಪಾರ್ಕ್, ಅಂಧೇರಿ ಪೂರ್ವ ಮುಂಬಯಿ ಇಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಈ ಪುರಸ್ಕಾರ ಪ್ರದಾನಿಸಲಾಗುವುದು ಎಂದು ಕಪಸಮ ಗೌರವ ಪ್ರಧಾನ ಕಾರ್ಯದರ್ಶಿ ಸಾ.ದಯಾ (ದಯಾನಂದ್) ಮತ್ತು ಜೊತೆ ಕಾರ್ಯದರ್ಶಿ ಸವಿತಾ ಎಸ್.ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here